1 ಪೂರ್ವಕಾಲ ವೃತ್ತಾಂತ 26:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರು ಯಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೇರೀಯನು ಮುಖ್ಯಸ್ಥನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದಾವೀದನ ಆಳಿಕೆಯ ನಾಲ್ವತ್ತನೆಯ ವರುಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರ್ಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು. ಅಧ್ಯಾಯವನ್ನು ನೋಡಿ |