1 ಪೂರ್ವಕಾಲ ವೃತ್ತಾಂತ 26:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
32 ಶ್ರೀಮಂತರೂ ಕುಟುಂಬಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಮಂದಿ ಇದ್ದರು. ಅರಸ ದಾವೀದನು ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲೂ ರಾಜಕೀಯ ಕಾರ್ಯಗಳಲ್ಲೂ ಅಧಿಕಾರಿಗಳನ್ನಾಗಿ ನೇಮಿಸಿದನು.
32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು.
32 ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.
32 ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.
ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.
ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.
ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.
ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.