Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:23
7 ತಿಳಿವುಗಳ ಹೋಲಿಕೆ  

“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.


ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು