Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇವಿುಸಲ್ಪಟ್ಟವರು ಯಾರಂದರೆ - ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ ಹಳ್ಳಿಗಳಲ್ಲಿಯೂ ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:25
11 ತಿಳಿವುಗಳ ಹೋಲಿಕೆ  

ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿಯೂ, ಅರಸನ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನು ಅವನಿಗೆ ಕೊಟ್ಟನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.


ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,


ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ


ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು