1 ಪೂರ್ವಕಾಲ ವೃತ್ತಾಂತ 28:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು. ಅಧ್ಯಾಯವನ್ನು ನೋಡಿ |