Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:5
19 ತಿಳಿವುಗಳ ಹೋಲಿಕೆ  

ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.


ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.


ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.


ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.


ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.


ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.


ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು