1 ಪೂರ್ವಕಾಲ ವೃತ್ತಾಂತ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ, ಅಧ್ಯಾಯವನ್ನು ನೋಡಿ |