Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:17
27 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.


ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು