Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನರು ದಾವೀದನ ಮಗನಾದ ಸೊಲೊಮೋನನನ್ನು ಪುನಃ ಅರಸನನ್ನಾಗಿ ಆರಿಸಿಕೊಂಡು ಅವನನ್ನು ರಾಜನನ್ನಾಗಿಸಿವುದಕ್ಕೂ, ಚಾದೋಕನನ್ನು ಯಾಜಕನಾಗುವುದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿ ಆರಿಸಿಕೊಂಡು ಪ್ರಭುವಾಗುವದಕ್ಕೂ ಚಾದೋಕನನ್ನು ಯಾಜಕನಾಗುವದಕ್ಕೂ ಅಭಿಷೇಕಿಸಿ ಯೆಹೋವನಿಗೋಸ್ಕರ ಪ್ರತಿಷ್ಠಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:22
19 ತಿಳಿವುಗಳ ಹೋಲಿಕೆ  

ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.


ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.


ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು