Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಐಶ್ವರ್ಯ, ಮಾನ, ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣ ಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:28
13 ತಿಳಿವುಗಳ ಹೋಲಿಕೆ  

ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.


ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.


ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.


ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.


ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು


ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.


ಇಸ್ರಾಯೇಲರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು