Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ ಗೋತ್ರ ಕುಟುಂಬಗಳ ಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಅರಸನ ಕೆಲಸದವರ ಮುಖ್ಯಸ್ಥರೂ ದೇವಾಲಯದ ಕೆಲಸಕ್ಕೋಸ್ಕರ ಸ್ವೇಚ್ಫೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:6
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.


ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.


ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು