Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಪೂರ್ಣಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಯೆಹೋವನಿಗೆ ಕಾಣಿಕೆ ಕೊಟ್ಟದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರ ನಾಯಕರುಗಳು ಪೂರ್ಣಹೃದಯದಿಂದಲೂ ಸ್ವಇಚ್ಛೆಯಿಂದಲೂ ಇಷ್ಟೆಲ್ಲಾ ಕಾಣಿಕೆಗಳನ್ನು ಕೊಟ್ಟಿದ್ದರಿಂದ ಇಸ್ರೇಲರು ಸಂತೋಷಗೊಂಡರು; ಅರಸನಾದ ದಾವೀದನೂ ತುಂಬ ಸಂತೋಷಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:9
22 ತಿಳಿವುಗಳ ಹೋಲಿಕೆ  

ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.


ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.


ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;


ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.


ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು