Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಹೆಬ್ರೋನಿನಲ್ಲಿದ್ದಾಗ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು ಇವು: ಅಮ್ನೋನ - ಜೆಸ್ರೀಲಿನ ಅಹೀನೋಮ ಇವನ ತಾಯಿ. ದಾನಿಯೇಲ - ಕರ್ಮೇಲಿನ ಆಬೀಗೈಲಳು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು - ಚೊಚ್ಚಲಮಗನು ಅಮ್ನೋನನು; ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು; ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:1
11 ತಿಳಿವುಗಳ ಹೋಲಿಕೆ  

ಕರ್ಮೆಲ್, ಜೀಫ್, ಯುಟ್ಟಾ,


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.


ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.


ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು