Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೆಹೋರಾಮ್, ಅಹಜ್ಯ, ಯೆಹೋವಾಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವನ ಮಗನು ಯೆಹೋಷಾಫಾಟ್; ಇವನ ಮಗನು ಯೆಹೋರಾಮ್; ಇವನ ಮಗನು ಅಹಜ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:11
15 ತಿಳಿವುಗಳ ಹೋಲಿಕೆ  

ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.


ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.


ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.


ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.


ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು


ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.


ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;


ಯೋವಾಷನ ಮಗ ಅಮಚ್ಯ. ಅಮಚ್ಯ ಮಗ ಅಜರ್ಯ; ಅಜರ್ಯನ ಮಗ ಯೋತಾಮ್.


ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.


ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ, ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು