Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಮೋನ್ ಹಾಗು ಯೋಷೀಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನ ಮಗನು ಮನಸ್ಸೆ; ಇವನ ಮಗನು ಆಮೋನ್; ಇವನ ಮಗನು ಯೋಷೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನಸ್ಸೆಯ ಮಗನು ಅಮೋನ. ಅಮೋನನ ಮಗನು ಯೋಷೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇವನ ಮಗನು ಆಮೋನನು; ಇವನ ಮಗನು ಯೋಷೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:14
17 ತಿಳಿವುಗಳ ಹೋಲಿಕೆ  

ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.


ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.


ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.


ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.


ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.


ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.


ಯೋಷೀಯನ ಮಕ್ಕಳು: ಚೊಚ್ಚಲ ಮಗ ಯೋಹಾನಾನ್, ಎರಡನೆಯವನು ಯೆಹೋಯಾಕೀಮ್, ಮೂರನೆಯವನು ಚಿದ್ಕೀಯ, ನಾಲ್ಕನೆಯವನು ಶಲ್ಲೂಮ್.


ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು