Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪೆದಾಯನಿಗೆ ಜೆರುಬ್ಬಾಬೆಲ್ ಮತ್ತು ಶಿಮ್ಮೀ ಎಂಬಿಬ್ಬರು ಮಕ್ಕಳಿದ್ದರು. ಜೆರುಬ್ಬಾಬೆಲನಿಗೆ ಮೆಷುಲ್ಲಾಮ್, ಹನನ್ಯ ಎಂಬ ಇಬ್ಬರು ಗಂಡುಮಕ್ಕಳು ಹಾಗೂ ಶೆಲೋಮೀತ್ ಎಂಬ ಮಗಳೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಪೆದಾಯನ ಮಕ್ಕಳು - ಜೆರುಬ್ಬಾಬೆಲ್, ಶಿಮ್ಮೀ ಇವರೇ. ಜೆರುಬ್ಬಾಬೆಲನ ಮಕ್ಕಳು - ಮೆಷುಲ್ಲಾಮ್, ಹನನ್ಯ ಎಂಬವರು; ಶೆಲೋಮೀತ್ ಎಂಬವಳು ಇವರ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:19
10 ತಿಳಿವುಗಳ ಹೋಲಿಕೆ  

ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


“ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಮಲ್ಕೀರಾಮ್, ಪೆದಾಯ್, ಶೆನಚ್ಚರ್, ಯೆಕಮ್ಯ, ಹೋಷಾಮ್ ಮತ್ತು ನೆದಬ್ಯ ಎಂಬ ಏಳು ಗಂಡುಮಕ್ಕಳು.


ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು