Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಅಲ್ಲೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅಲ್ಲಿ ಅವರು, ಅಳಿದುಳಿದಿದ್ದ ಅಮಾಲೇಕ್ಯರನ್ನು ಸಂಹರಿಸಿ ತಾವೇ ಅಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:43
12 ತಿಳಿವುಗಳ ಹೋಲಿಕೆ  

ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.


ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇದೆ.


ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು