Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:22
11 ತಿಳಿವುಗಳ ಹೋಲಿಕೆ  

ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್.


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.


ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.


ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.


ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .


ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು