Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:26
18 ತಿಳಿವುಗಳ ಹೋಲಿಕೆ  

ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.


ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.


ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.


ಯೆಹೋವನೇ, ಅಶ್ಶೂರದ ಅರಸರು ಸಕಲ ಜನಾಂಗಗಳನ್ನೂ, ಅವರ ದೇಶಗಳನ್ನೂ ಹಾಳು ಮಾಡಿದ್ದು ನಿಜ.


ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು