Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಜಾಜನ ಮಗನೂ ಶೆಮಾಯನ ಮೊಮ್ಮಗನೂ ಆದ ಬೆಳ. ಈ ಗೋತ್ರದವರು ಅರೋಯೇರದಲ್ಲಿಯೂ ಅಲ್ಲಿಂದ ನೆಬೋ ಹಾಗೂ ಬಾಳ್ಮೆಯೋನ್ ಸ್ಥಳಗಳವರೆಗಿನ ಪ್ರದೇಶಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳನು ಆಜಾಜನ ಮಗನು; ಇವನು ಶೆಮಯನ ಮಗನು; ಇವನು ಯೋವೇಲನ ಮಗನು. ಯೋವೇಲ್ಯರು ಅರೋಯೇರಿನಿಂದ ನೆಬೋ, ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬೆಳನು ಆಜಾಜನ ಮಗ, ಆಜಾಜನು ಶೆಮಯನ ಮಗ, ಶೆಮಯನು ಯೋವೇಲನ ಮಗನು. ಇವರೆಲ್ಲರೂ ನೆಬೋ ಮತ್ತು ಬಾಳ್ಮೆಯೋನ್ ಪ್ರಾಂತ್ಯದ ಅರೋಯೇರ್ ಸುತ್ತಮುತ್ತ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:8
10 ತಿಳಿವುಗಳ ಹೋಲಿಕೆ  

ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.


ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.


ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ಆರೋಯೇರಿನ ಪಟ್ಟಣಗಳು ನಿರ್ಜನವಾಗಿ, ಮಂದೆಗಳಿಗೆ ಆಸರೆಯಾಗುವವು. ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ತಂಗುವವು.


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,


ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ,


“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು