Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಸಾಫನು ದ್ವಿತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಆಸಾಫ, ಬೆರಕ್ಯ, ಶಿಮ್ಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇವನ ಬಲಗಡೆಯಲ್ಲಿ ನಿಲುತ್ತಿದ್ದ ಇವನ ಸಹೋದರನಾದ ಆಸಾಫನು [ಎರಡನೆಯವನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೇಮಾನನ ಸಂಬಂಧಿಯ ಹೆಸರು ಆಸಾಫ್. ಇವನು ಹೇಮಾನನ ಬಲಗಡೆಯಲ್ಲಿದ್ದುಕೊಂಡು ಸೇವೆಮಾಡಿದನು. ಆಸಾಫನು ಬೆರೆಕ್ಯನ ಮಗನು. ಬೆರೆಕ್ಯನು ಶಿಮ್ಮನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:39
33 ತಿಳಿವುಗಳ ಹೋಲಿಕೆ  

ಗಾಯಕರಲ್ಲಿ; ಆಸಾಫನ ಸಂತಾನದರು - 148.


ಗಾಯಕರಲ್ಲಿ: ಆಸಾಫ್ಯರು 128


ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.


ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.


ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.


ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.


ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.


ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,


ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.


ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ


ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.


ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.


ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.


ದಾವೀದನು ಆಸಾಫನನ್ನೂ, ಅವನ ಸಹೋದರರನ್ನೂ ಯೆಹೋವನನ್ನು ಕೊಂಡಾಡಿ ಕೀರ್ತಿಸುವುದಕ್ಕಾಗಿ ಸ್ತೋತ್ರಗೀತೆಗಳನ್ನು ಹಾಡುವುದಕ್ಕಾಗಿ ಆ ದಿನದಲ್ಲೇ ಮೊದಲು ನೇಮಿಸಿದನು. ಅವರು ಹಾಡಿದ್ದೇನಂದರೆ;


ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.


ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.


ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು