Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಮೆರಾರೀ ಕುಟುಂಬದ ಏತಾನ ತೃತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಏತಾನ, ಕೀಷೀ, ಅಬ್ದೀಯ, ಮಲ್ಲೂಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ ಮೆರಾರೀಯನೂ ಆದ ಏತಾನನು [ಮೂರನೆಯವನು]. ಇವನು ಕೀಷೀಯ ಮಗನು; ಇವನು ಅಬ್ದೀಯ ಮಗನು; ಇವನು ಮಲ್ಲೂಕನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಮೆರಾರೀಯ ಸಂತತಿಯವರು ಹೇಮಾನ ಮತ್ತು ಅಸಾಫನ ಸಂಬಂಧಿಕರು. ಇವರು ಹೇಮಾನನ ಎಡಗಡೆಯಲ್ಲಿ ನಿಂತು ಹಾಡುವ ಗಾಯಕರು. ಏತಾನನು ಕೀಷೀಯ ಮಗ. ಕೀಷೀಯು ಅಬ್ದೀಯ ಮಗ. ಅಬ್ದೀಯ ಮಲ್ಲೂಕನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವರ ಸಹೋದ್ಯೋಗಿ ಮೆರಾರೀಯ ಪುತ್ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಅವನು ಅಬ್ದೀಯ ಮಗನು, ಅವನು ಮಲ್ಲೂಕನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:44
7 ತಿಳಿವುಗಳ ಹೋಲಿಕೆ  

ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.


ದೇವರಾದ ಯೆಹೋವನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ಕೈಕೆಳಗಿದ್ದುಕೊಂಡು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ ಯೆದುತೂನ್ ಹೇಮಾನರು ಅರಸನ ಸೇವೆಯಲ್ಲಿದ್ದರು.


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.


ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,


ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,


ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.


ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು