Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 6:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 6:60
12 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.


ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.


ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!


ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.


ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;


ಆಷಾನ್, ಬೇತ್‌ಷೆಮೆಷ್‌ ಎಂಬ ಗೋಮಾಳ ಸಹಿತವಾದ ಪಟ್ಟಣಗಳನ್ನೂ,


ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು.


ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು