Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:1
22 ತಿಳಿವುಗಳ ಹೋಲಿಕೆ  

ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.


ಹೀಗಿರಲಾಗಿ ನಾನು ನನ್ನ ದೇವರ ಪ್ರೇರಣೆಯಿಂದ ಗಣ್ಯರನ್ನು, ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಸಾಧಾರಣ ಜನರನ್ನೂ ಜನಗಣತಿಗಾಗಿ ಸಭೆಸೇರಿಸಿದನು. ಆಗ ಯೆರೂಸಲೇಮಿಗೆ ಮೊದಲು ಬಂದವರ ಹೆಸರುಗಳ ಪಟ್ಟಿಯು ನನಗೆ ಸಿಕ್ಕಿತು. ಅದರಲ್ಲಿ ಬರೆದಿದ್ದೇನೆಂದರೆ,


ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.


ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,


ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು