Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗೋತ್ರಗಳ ಮುಖ್ಯಸ್ಥರಾದ ಯಾಜಕರ ಒಟ್ಟು ಸಂಖ್ಯೆ ಒಂದು ಸಾವಿರದ ಏಳನೂರ ಅರವತ್ತು ಮಂದಿ, ದೇವಾಲಯದ ಎಲ್ಲಾ ಕೆಲಸಗಳಲ್ಲಿ ಅವರು ನಿಪುಣರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗೋತ್ರಪ್ರಧಾನರೂ ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಸಹೋದರರೂ ಒಟ್ಟಿಗೆ ಸಾವಿರದ ಏಳುನೂರ ಅರುವತ್ತು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:13
6 ತಿಳಿವುಗಳ ಹೋಲಿಕೆ  

ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.


ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.


ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.


ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು