1 ಪೂರ್ವಕಾಲ ವೃತ್ತಾಂತ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಈ ದಿಕ್ಕುಗಳಲ್ಲಿರುವ ಬಾಗಲುಗಳನ್ನು ಕಾಯುವವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.