Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:26
9 ತಿಳಿವುಗಳ ಹೋಲಿಕೆ  

ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.


ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು