Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ನಿಮಗೆ ತೋರಿಸಿರುವ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮ್ಕಾ ಗಾವುಕ್ ಮನುನ್ ಅಸಲ್ಲ್ಯಾ ಕುರ್ಪೆಚ್ಯಾ ವಿಶಯಾತ್ ಸಾಂಗುನ್ ದಿಲ್ಲ್ಯಾ ಪ್ರವಾದ್ಯಾನಿ ಹ್ಯಾ ಫುಕೊಟ್ಚ್ಯಾ ದೆನ್ಗಿ ವಿಶಯಾತ್ ಹುರ್ಶಾಕಿನ್ ಇಚಾರ್ ಅನಿ ಸೊದ್ನಾ ಕರಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:10
24 ತಿಳಿವುಗಳ ಹೋಲಿಕೆ  

ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.


ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.


ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು;


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು