Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಚೆಸಾಟ್ನಿ ತುಮ್ಚೊ ಶಾನೆಪಾನಾಚೊ ಪಟ್ಟೊ ಭಾಂದುನ್ ಘೆವ್ನ್ ಜಾಗೆ ರಾವಾ, ಜೆಜು ಕ್ರಿಸ್ತ್ ದಿಸ್ತಲ್ಯಾ ಯೆಳಾರ್ ತುಮ್ಕಾ ಗಾವ್ನರ್ ಹಾಯ್ ತ್ಯಾ ಕುರ್ಪೆಚ್ಯಾ ದೆನ್ಗಿಯಾಂಚ್ಯಾ ವರ್ತಿ ಸಗ್ಳೊ ಬರೊಸೊ ಥವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:13
35 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,


ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.


ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು