Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆಯುವವರಾಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖಾಲ್ತಿ ಹೊವ್ನ್ ಚಲ್ತಲಿ ಪೊರಾ ತುಮಿ; ಅದ್ದಿ ಕಾಯ್ಬಿ ಕಳಿನಸಲ್ಲ್ಯಾ ಎಳಾರ್ ಕರಲ್ಲ್ಯಾ ಸಾರ್ಕೆ, ತುಮ್ಚ್ಯಾ ಬುರ್ಶ್ಯಾ ಚಾಲಿ ಸಾರ್ಕೆ ಚಲುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:14
12 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.


ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು