Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾ ಬಾಬಾನ್ ಅದ್ದಿಚ್ಯಾನುಚ್ ವಳ್ಕುನ್ ಎಚುನ್ ಕಾಡಲ್ಲ್ಯಾ, ಪವಿತ್ರ್ ಆತ್ಮ್ಯಾಚ್ಯಾ ವೈನಾ ಯೆಗ್ಳುನ್ ಕಾಡಲ್ಲಿ, ಜೆಜು ಕ್ರಿಸ್ತಾಕ್ ಖಾಯ್ಲ್ ಹೊವ್ನ್ ಚಲ್ತಲ್ಯಾ ಜಿವನಾಕ್ ಒಪ್ಸುನ್ ದಿಲ್ಲೆ ತುಮಿಚ್ ತುಮ್ಕಾ ಭರ್ಪುರ್ ಕುರ್ಪಾ ಅನಿ ಶಾಂತಿ ಗಾಂವುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:2
53 ತಿಳಿವುಗಳ ಹೋಲಿಕೆ  

ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.


ನಿಮಗೆ ಕರುಣೆಯೂ, ಶಾಂತಿಯೂ, ಪ್ರೀತಿಯೂ ಹೆಚ್ಚಾಗಿ ದೊರೆಯಲಿ.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.


ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು