1 ಪೇತ್ರನು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಚೆ ವೈನಾ ತೆಕಾ ಝಿತ್ತೊ ಕರುನ್ ಉಟ್ವುನ್ ಅಪ್ನಾಚಿ ಮಹಿಮಾ ದಿಲ್ಲ್ಯಾ ದೆವಾ ವರ್ತಿ ತುಮಿ ವಿಶ್ವಾಸ್ ಕರುಕ್ ಪಾವ್ಲ್ಯಾಸಿ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.