Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಪವಿತ್ರ್ ಪುಸ್ತಕ್ ಮನ್ತಾ, ಸಗ್ಳಿ ಮಾನುಸ್ ಜಾತ್ ಗವ್ತಾ ಸಾರ್ಕೆ; ತೆಚಿ ಸಗ್ಳಿ ಮಹಿಮಾ ಗವ್ತಾಚ್ಯಾ ಫುಲ್ಲಾ ಸಾರ್ಕೆ, ಗವಾತ್ ವಾಡ್ತಾ, ಪುಲ್ಲ್ ಝಡ್ತಾ, ಖರೆ ಧನಿಯಾಚೊ ಸಬದ್ ಶಾಶ್ವತ್ ರಾತಾ, ಹ್ಯೊ ಸಬದ್ ಮಟ್ಲ್ಯಾರ್ ತುಮ್ಕಾ ಪರ್ಗಟ್ ಕರಲ್ಲಿ ಬರಿ ಖಬರುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:24
15 ತಿಳಿವುಗಳ ಹೋಲಿಕೆ  

ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.


ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.


ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.


ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು