1 ಪೇತ್ರನು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ಇತರ ಜನರಿಗೆ ಕೇಡುಮಾಡಬೇಡಿ, ಸುಳ್ಳಾಡದಿರಿ, ಜನರನ್ನು ಮೋಸಗೊಳಿಸಬೇಡಿ, ಹೊಟ್ಟೆಕಿಚ್ಚುಪಡದಿರಿ, ಜನರ ಬಗ್ಗೆ ಕೆಟ್ಟಮಾತುಗಳನ್ನು ಆಡದಿರಿ. ಇವುಗಳನ್ನೆಲ್ಲಾ ನಿಮ್ಮ ಜೀವಿತದಿಂದ ಹೊರಕ್ಕೆ ಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತೆಚೆಸಾಟ್ನಿ ಸಗ್ಳ್ಯಾ ರಿತಿಚೆ ಬುರ್ಶೆಪಾನ್, ಹಾಟ್ಮಾರಿಪಾನ್, ಕುಶ್ಡೆಪಾನ್ ಇರ್ಸ್ಯಾ, ಢೊಂಗ್ ಅನಿ ಸಗ್ಳ್ಯಾ ರಿತಿಚೆ ವಾಯ್ಟ್ ಬೊಲ್ನೆ ಸೊಡುನ್ ಸೊಡಾ. ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.