Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪ್ರಿಯರೇ, ಪ್ರವಾಸಿಗಳೂ ಪರದೇಶಸ್ಥರೂ ಆಗಿರುವ ನೀವು ನಿಮ್ಮ ಆತ್ಮದ ಮೇಲೆ ಯುದ್ಧಮಾಡುವ ಶಾರೀರಿಕ ಅಭಿಲಾಷೆಗಳಿಗೆ ದೂರವಾಗಿರಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜ್ಯಾ ಪ್ರೆಮಾಚ್ಯಾನು ಮಿಯಾ ತುಮ್ಕಾ ವಿನಂತಿ ಕರ್ತಾ ತುಮಿ ಹ್ಯಾ ಜಗಾತ್ ಪರ್ವಾಸಾಕ್ ಯೆಲ್ಲೆ ಅನಿ ದುಸ್ರ್ಯಾ ದೆಶಾಚೆ ಸಾರ್ಕೆ ಹೊವ್ನ್ ಹಾಸಿ, ತಸೆ ಹೊವ್ನ್ ತುಮ್ಕಾಚ್ ತುಮಿ ತುಮ್ಚ್ಯಾ ಆಂಗಾಚ್ಯಾ ಆಶಾಕ್ನಿ ಸೊಡುನ್ ದಿವ್ ನಕಾಸಿ ತಿ ಕನ್ನಾಬಿ ಆತ್ಮ್ಯಾಚ್ಯಾ ವಿರೊದ್ ಝಡ್ಗುನ್ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:11
35 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ?


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ನನ್ನ ಪ್ರವಾಸದ ಮನೆಯಲ್ಲಿ ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.


“ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.


ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.


ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.


ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು