1 ಪೇತ್ರನು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರಭುವಾದ ಯೇಸುವೇ ಜೀವವುಳ್ಳ “ಕಲ್ಲು.” ಈ ಲೋಕದ ಜನರು ತಮಗೆ ಆ “ಕಲ್ಲು” (ಯೇಸು) ಬೇಡವೆಂದು ತೀರ್ಮಾನಿಸಿದರು. ಆದರೆ ಆತನು ದೇವರಿಂದ ಆರಿಸಲ್ಪಟ್ಟ “ಕಲ್ಲು.” ಆತನು ದೇವರಿಗೆ ಅಮೂಲ್ಯನಾಗಿದ್ದಾನೆ. ಆದ್ದರಿಂದ ಆತನ ಹತ್ತಿರಕ್ಕೆ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹ್ಯೊ ಝಿತ್ತೊ ಗುಂಡೊ ಹೊವ್ನ್ ಹೊತ್ತ್ಯಾ ಧನಿಯಾಕ್ಡೆ ಯೆವಾ ಲೊಕಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊ ದೆವಾನ್ ತೆಕಾ ಎಚುನ್ ಘೆಟ್ಲಾ. ಅಧ್ಯಾಯವನ್ನು ನೋಡಿ |