Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆಯಲ್ಪಟ್ಟದ್ದು, ಮಾನ್ಯವಾದದ್ದು; ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ ಎಂದು ಶಾಸ್ತ್ರದಲ್ಲಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ; ಆಯ್ಕ್ ಚಿಯೊನಾತ್ ಮಿಯಾ ಎಚುನ್ ಕಾಡಲ್ಲೊ ಎಕ್ ಗುಂಡೊ ಥವ್ತಾ ತೊ ಲೈ ಮಹತ್ವಾಚೊ ಅನಿ ಕಿಮ್ತಿಚೊ ಗುಂಡೊ, ಅನಿ ತೆಚೆ ವರ್ತಿ ಜೆ ಕೊನ್ ವಿಶ್ವಾಸ್ ಥವ್ತಾ ತೊ ಕನ್ನಾಬಿ ನಿರಾಶ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:6
27 ತಿಳಿವುಗಳ ಹೋಲಿಕೆ  

ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.


ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು