Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಟ್ಟದ್ದನ್ನು ಮಾಡಿ ಸಂಕಟ ಪಡುವುದಕ್ಕಿಂತ ಒಳ್ಳೆಯದನ್ನು ಮಾಡಿ ಸಂಕಟಪಡುವುದು ಉತ್ತಮ. ಹೌದು, ಅದು ದೇವರ ಅಪೇಕ್ಷೆಯಾಗಿದ್ದರೆ ಅದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್, ವಾಯ್ಟ್ ಕರ್ತಲ್ಲ್ಯಾಚ್ಯಾನ್ಕಿ ದೆವಾಚಿ ಇಚ್ಚ್ಯಾ ಹೊಯ್ ಹೊಲ್ಲ್ಯಾರ್ ಬರೆ ಕರ್ತಲ್ಯಾಸಾಟ್ನಿ ಕಸ್ಟ್ ಸೊಸ್ತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:17
10 ತಿಳಿವುಗಳ ಹೋಲಿಕೆ  

ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು