Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ, ಒಳ್ಳೇ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ದೆವಾಚ್ಯಾ ವಾಂಗ್ಡಾ ಎಕ್ ಬರ್‍ಯಾ ಮನಾನ್ ಗೊಸ್ಟ್ ದಿತಲೆ ಹೊವ್ನ್ ಹಾಯ್, ಹೆ ಬಾಲ್ತಿಮ್ ತುಮ್ಕಾ ಜೆಜು ಕ್ರಿಸ್ತಾಚ್ಯಾ ಝಿತ್ತೊ ಹೊವ್ನ್ ಉಟಲ್ಲ್ಯಾಚ್ಯಾ ವೈನಾ ಹುರ್‍ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:21
30 ತಿಳಿವುಗಳ ಹೋಲಿಕೆ  

ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.


ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.


ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.


ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು