Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ಜೆಜು ಸರ್‍ಗಾಕ್ ಗೆಲಾ, ತೊ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲಾ, ಅನಿ ತೊ ದೆವ್‍ದುತಾ, ಅಧಿಕಾರಿಯಾ ಅನಿ ಅಜಾಪಾಂಚ್ಯಾ ವರ್ತಿ ರಾಜ್ವಟ್ಕಿ ಕರುಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:22
24 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?


“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು