Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಸೆ ಸಾರಾನ್ ಅಬ್ರಾಹಾಮಾಕ್ ಖಾಲ್ತಿ ಹೊವ್ನ್ ಚಲ್ಲಿನ್ ಅನಿ ತೆಕಾ ಅಪ್ಲೊ ಯಜಮಾನ್ ಮನುನ್ ಬಲ್ವುಲಿನ್, ತಸೆಚ್ ತುಮಿ ಬರೆ ಅನಿ ಭಿಂಯೆ ನಸ್ತಾನಾ ಚಲ್ಲ್ಯಾಸಿ ಹೊಲ್ಯಾರ್ ತುಮಿ ಸಾರಾಚಿ ಲೆಕಿಯಾ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 3:6
12 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.


ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು