Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ ಆಶ್ಚರ್ಯಪಡಬೇಡಿರಿ; ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಪ್ರೆಮಾಚ್ಯಾ ವಾಂಗ್ಡಿಯಾನು, ತುಮಿ ಅತ್ತಾ ಸೊಸುಲಾಗಲ್ಯಾ ತರಾಸಾಚ್ಯಾ ವಿಶಯಾತ್ ಅಜಾಪ್ ಹೊವ್ ನಕಾಸಿ, ತೆ ತುಮ್ಚೊ ವಿಶ್ವಾಸ್ ಪರಿಕ್ಷಾ ಕರ್ತಾ ಸೊಸುಕ್ ಹೊಯ್ನಸಲೊ ತರಾಸ್ ತುಮ್ಕಾ ಹೊವ್ಲಾ ಮನುನ್ ಚಿಂತುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 4:12
11 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.


ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.


ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು