1 ಪೇತ್ರನು 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಸೆ ರ್‍ಹಾತಾನಾ ಜೆ ಕೊನ್ ಕಸ್ಟ್ ಸೊಸುನ್ಗೆತಾ ತೆನಿ ತೆಂಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಅಪ್ನಾಕ್ ರಚಲ್ಲ್ಯಾಚೆ ಬರೊಸೊ ಥವ್ನ್ ರ್‍ಹಾತ್ಯಾತ್ ಅನಿ ತೊ ಅಪ್ನಾಚೆ ಗೊಸ್ಟ್ ಕನ್ನಾಬಿ ಪಾಳ್ತಾ. ಅಧ್ಯಾಯವನ್ನು ನೋಡಿ |