1 ಪೇತ್ರನು 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅತ್ತಾ ಮಿಯಾ ಎಕ್ ಜಾನ್ತೊ ಹೊವ್ನ್ ಅನಿ ಕ್ರಿಸ್ತಾಚ್ಯಾ ಕಸ್ಟಾಚೊ ಎಕ್ ಸಾಕ್ಷಿ ಹೊವ್ನ್, ಅನಿ ತಸೆಚ್ ಫಿಡೆ ದಿಸುನ್ ಯೆತಲ್ಲ್ಯಾ ಮಹಿಮೆತ್ ವಾಟೊ ಘೆತಲೊ ಎಕ್ ಮಾನುಸ್ ಹೊವ್ನ್ ತುಮ್ಚ್ಯಾ ಮದ್ದಿ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಜಾನ್ತ್ಯಾನಿಕ್ಡೆ ವಿನಂತಿ ಕರ್ತಾ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.