Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾನ್ ತುಮ್ಚ್ಯಾ ತಾಬೆತ್ ದಿಲ್ಲ್ಯಾ ಹಿಂಡಾಂಚಿ ಕುರ್‍ಬುರಾ ಹೊವ್ನ್ ರ್‍ಹಾವ್ಚೆ. ಅನಿ ಬರ್ಯಾ ಮನಾನ್ ತೆಂಚಿ ಕಾಳ್ಜಿ ಘೆವ್ಚೆ, ಮನ್ ನಸ್ತಾನಾ ಕರುಚೆ ನ್ಹಯ್, ದೆವಾಕ್ ಪಾಜೆ ತಸೆ ಕರುಚೆ, ತುಮಿ ಕರ್ತಲೆ ಕಾಮ್ ಮಜುರಿಸಾಟ್ನಿ ಕರುನಕಾಶಿ, ಖರೆ ಸೆವಾ ಕರ್ತಲ್ಯಾ ಖರ್ಯಾ ಆಶೆನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 5:2
41 ತಿಳಿವುಗಳ ಹೋಲಿಕೆ  

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,


ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.


ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು