Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಅತ್ತಾ ಜಿವನಾಚ್ಯಾ ಗೊಸ್ಟಿಚ್ಯಾ ವಿಶಯಾತ್ ಬೊಲ್ತಾಂವ್, ಹ್ಯೊ ಜಗ್ ರಚುಚ್ಯಾ ಅದ್ದಿಚ್ಯಾನ್ ಹೊತ್ತೆ. ತೆ ಅಮಿ ಕಾನಾನಿ ಆಯಿಕ್ಲಾಂವ್,ಅನಿ ಅಮ್ಚ್ಯಾ ಡೊಳ್ಯಾನಿ ಬಗ್ಲಾಂವ್,ಅಮಿ ತೆಕಾ ಬಗುನ್ ಅಮ್ಚ್ಯಾ ಹಾತಿನ್ ಅಪಡ್ಲ್ಯಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 1:1
23 ತಿಳಿವುಗಳ ಹೋಲಿಕೆ  

ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.


ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು