1 ಯೋಹಾನನು 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಜೀವವು ಪ್ರತ್ಯಕ್ಷವಾಯಿತು; ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಜೀವವು ನಮಗೆ ಪ್ರತ್ಯಕ್ಷವಾಯಿತು. ನಾವು ಅದನ್ನು ನೋಡಿದ್ದರಿಂದ ಅದರ ಬಗ್ಗೆ ಸಾಕ್ಷಿ ಹೇಳ ಬಲ್ಲೆವು. ನಾವೀಗ ನಿಮಗೆ ಆ ಜೀವದ ಬಗ್ಗೆ ಸಾಕ್ಷಿ ಹೇಳುತ್ತೇವೆ. ಅದು ತಂದೆಯಾದ ದೇವರ ಸಂಗಡವಿದ್ದ ನಿತ್ಯವಾದ ಜೀವ. ದೇವರು ಈ ಜೀವವನ್ನು ನಮಗೆ ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೊ ಶಾಶ್ವತ್ ಜಿವ್ ಅಮ್ಕಾ ದಿಸ್ಲೊ. ದೆವ್ ಬಾಬಾಚ್ಯಾ ವಾಂಗ್ಡಾ ಹೊತ್ತ್ಯಾ ತ್ಯಾ ಜಿವಾಚ್ಯಾ ವಚನಾಕ್ ಅಮಿ ಬಗಟಲ್ಲ್ಯಾಸಾಟ್ನಿ, ತೆಚ್ಯಾ ವಿಶಯಾತ್ ಸಾಕ್ಷಿ ದಿತಾಂವ್ ಅನಿ ತುಮ್ಕಾ ಸಾಂಗ್ತಾಂವ್. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.