1 ಯೋಹಾನನು 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಂದೆಗಳೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ. ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಕಳ್ವುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು ತುಮಿ ಬುರ್ಶ್ಯಾಕ್ ಹರ್ವಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ಪೊರಾನು, ತುಮಿ ಬಾಬಾಕ್ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ಅಧ್ಯಾಯವನ್ನು ನೋಡಿ |