Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮನ್ನು ತಪ್ಪುಮಾರ್ಗಕ್ಕೆ ಸೆಳೆಯುವ ಜನರನ್ನು ಕುರಿತು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಕಾ ಚುಕೆಚ್ಯಾ ವಾಟೆಕ್ ನ್ಹೆತಲ್ಯಾ ಲೊಕಾಂಚ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಮಿಯಾ ಲಿವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 2:26
12 ತಿಳಿವುಗಳ ಹೋಲಿಕೆ  

ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.


ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು