Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಯೋಹಾನನು 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬಾಬಾನ್ ಅಮ್ಚೊ ಕವ್ಡೊ ಲೈ ಪ್ರೆಮ್ ಕರ್ಲಾ ಮನುನ್ ಬಗಾ! ಅಮ್ಕಾ ದೆವಾಚಿ ಪೊರಾ ಮನುನ್ ಬಲ್ವು ಸಾರ್ಕೆ ಕರ್ಲ್ಯಾನ್, ಖರೆ ಮಟ್ಲ್ಯಾರ್ ಅಮಿ ದೆವಾಚಿ ಪೊರಾ, ಜಗ್ ಅಮ್ಕಾ ವಳ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ದೆವಾಕ್ ವಳ್ಕಿನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಯೋಹಾನನು 3:1
33 ತಿಳಿವುಗಳ ಹೋಲಿಕೆ  

ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು